ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಫೋಟ;ಸಚಿವ ಮುರಗೇಶ್ ನಿರಾಣಿ ಸಂತಾಪ

ನವದೆಹಲಿ| pavithra| Last Modified ಮಂಗಳವಾರ, 23 ಫೆಬ್ರವರಿ 2021 (11:26 IST)
ನವದೆಹಲಿ : ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಫೋಟವಾದ ಹಿನ್ನಲೆಯಲ್ಲಿ 6 ಮಂದಿ ಬಲಿಯಾಗಿದ್ದಾರೆ. ಈ ಘಟನೆಗೆ ಬಗ್ಗೆ ಸಚಿವ ಮುರಗೇಶ್ ನಿರಾಣಿ ಸಂತಾಪ ಸೂಚಿಸಿದ್ದಾರೆ.

ಸಚಿವ ಮುರಗೇಶ್ ನಿರಾಣಿ ಟ್ವೀಟ್ ಮಾಡಿ, ಯಾರೇ ಭಾಗಿ ಆಗಿದ್ರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಎಷ್ಟೇ ಪ್ರಭಾವಿಗಳು ಆಗಿದ್ದರೂ ಬಿಡುವುದಿಲ್ಲ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಈಗಾಗಲೇ ಘಟನಾ ಸ್ಥಳಕ್ಕೆ ತೆರಳಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮುಂದಿನ ಬಾರಿ ಇಂತಹ ಅವಘಡಗಳು ಮರುಕಳಿಸದಂತೆ ಮುನ್ನೆಚ್ಚರಿಕೆ  ತೆಗೆದುಕೊಳ್ಳಲಾಗುವುದು. ಹಾಗೇ ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಗಳಿಗೆ ದುಃಖಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :