ಬರೇಲಿ : ಸಾಮೂಹಿಕ ಮಾನಭಂಗಕ್ಕೊಳಗಾದ 22 ವರ್ಷದ ಯುವತಿಯೊಬ್ಬಳು ಆರೋಪಿ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬರೇಲಿಯಲ್ಲಿ ನಡೆದಿದೆ. ಕಾಲೇಜಿಗೆ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಮಾನಭಂಗ ನಡೆಸಿ ಅದನ್ನು ವಿಡಿಯೋ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು. ಆದರೆ ಯುವತಿ ಈ ವಿಚಾರವನ್ನು ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಹಿನ್ನಲೆಯಲ್ಲಿ ಆರೋಪಿಗಳ ಮನೆಯವರು ಕೇಸ್ ವಾಪಾಸು