ಕೊಲಂಬೊ : ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ಶ್ರೀಲಂಕಾದಿಂದ ವೈದ್ಯಕೀಯ ನೆರವು ನೀಡುವಂತೆ ಮನವಿ ಮಾಡಿದ್ದಾರೆ.ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದ ತನಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಲಂಕಾ ಅಧ್ಯಕ್ಷರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಕಳೆದ ಆಗಸ್ಟ್ 7ರಂದೇ ನಿತ್ಯಾನಂದ ಕೈಲಾಸ ಸಾರ್ವಭೌಮ ರಾಜ್ಯದಲ್ಲಿ ವೈದ್ಯಕೀಯ ಸೌಲಭ್ಯದ ಕೊರೆತೆಯನ್ನು ಉಲ್ಲೇಖಿಸಿ ಲಂಕಾ ಅಧ್ಯಕ್ಷರಿಗೆ