ಮಾಜಿ ಸಿಎಂ ಜಯಲಲಿತಾ ಅವರಿಗೆ ವಿನಾಯತಿ ಕೊಟ್ಟಂತೆ ನನಗೂ ಕೊಡಿ ಎಂದು ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿಯಾಗಿ ನಾಲ್ಕು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ವಿ.ಕೆ.ಶಶಿಕಲಾ, ಇದೀಗ ಪರಪ್ಪನ ಜೈಲಿನಲ್ಲಿ ತಮ್ಮ ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ನಿಧನವಾಗಿದ್ದರಿಂದ ಅವರ ಹೆಸರನ್ನು ಪ್ರಕರಣದಿಂದ ತೆಗೆದುಹಾಕಿ ವಿನಾಯತಿ ನೀಡಲಾಗುವುದು ಎಂದು ಕೋರ್ಟ್ ಹೇಳಿಕೆ ನೀಡಿದ