ನವದೆಹಲಿ : ಏರ್ಸ್ಟ್ರೈಕ್ ಬಗ್ಗೆ ನಮಗೆ ಸಂಪೂರ್ಣವಾದ ಮಾಹಿತಿ ಕೊಡಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳವಾರದಂದು ಭಾರತೀಯ ವಾಯುಪಡೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಮಾಹಿತಿ ತಿಳಿಸಿಲ್ಲ. ಏರ್ಸ್ಟ್ರೈಕ್ ಬಗ್ಗೆ ನಾವು ಮಾಧ್ಯಮಗಳನ್ನು ನೋಡಿ ಮಾಹಿತಿ ಪಡೆದಿದ್ದೇವೆ. ಯಾವ ಪ್ರದೇಶದ ಮೇಲೆ ದಾಳಿ