ಗೋದ್ರಾ ಹತ್ಯಾಕಾಂಡ: 11 ಅಪರಾಧಿಗಳ ಗಲ್ಲುಶಿಕ್ಷೆಗೆ ಹೈಕೋರ್ಟ್ ತಡೆ

ಅಹಮದಾಬಾದ್| Kusuma| Last Modified ಸೋಮವಾರ, 9 ಅಕ್ಟೋಬರ್ 2017 (14:31 IST)
ಅಹಮದಾಬಾದ್: 2002ರ ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 11 ದೋಷಿಗಳಿಗೆ ನೀಡಿದ್ದ ಗಲ್ಲುಶಿಕ್ಷೆಗೆ ಗುಜರಾತ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಪರಾಧಿಗಳಿಗೆ ನೀಡಿರುವ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಡಿಸಿ ಆದೇಶ ನೀಡಿದೆ.
ಫೆಬ್ರವರಿ 27ರಂದು ಗೋದ್ರಾ ಸಾಬರಮತಿ ಎಕ್ಸ್ ಪ್ರೆಸ್ ರೈಲಿನ ಎಸ್ 6 ಬೋಗಿಗೆ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ 59 ಕರಸೇವಕರು ಸಜೀವ ದಹನವಾಗಿದ್ದರು. ಈ ಪ್ರಕರಣದಲ್ಲೆ ಕೋರ್ಟ್ 11 ದೋಷಿಗಳಿಗೆ ಮರಣದಂಡನೆ, 20 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇನ್ನುಳಿದ 63 ಮಂದಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು.> > ಪ್ರಕರಣದಲ್ಲಿ 63 ಮಂದಿಯನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಗುಜರಾತ್ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಪೀಠ ವಜಾಗೊಳಿಸಿದೆ. ಇನ್ನು ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡುವಂತೆ ಹೈಕೋರ್ಟ್ ಇಂದು ಸಹ ಗುಜರಾತ್ ಸರ್ಕಾರಕ್ಕೆ ಆದೇಶಿಸಿದೆ.


ಇದರಲ್ಲಿ ಇನ್ನಷ್ಟು ಓದಿ :