ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆಯ ಪ್ರಮಾಣ ತಗ್ಗಿ, ಹವಾಮಾನ ಪರಿಸ್ಥಿತಿ ಸುಧಾರಿಸಿದ್ದು ಈ ಹಿನ್ನೆಲೆ ಬಾಲ್ಟಾಲ್ ಬೇಸ್ನಿಂದ ಮತ್ತೆ ಅಮರನಾಥ ಯಾತ್ರೆ ಪುನರಾರಂಭಗೊಳಿಸಲಾಗಿದೆ. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಹೆಲಿಕಾಪ್ಟರ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನದಿಂದ ಪಹಲ್ಗಾಮ್ ಬೇಸ್ನಿಂದ ಯಾತ್ರೆಯನ್ನು ಪುನರಾರಂಭ ಮಾಡಲಾಗಿತ್ತು. ಹವಾಮಾನ ಪರಿಸ್ಥಿತಿ ಸೂಕ್ತವಾಗಿದ್ದ ಹಿನ್ನೆಲೆ 6491 ಮಂದಿ ಯಾತ್ರಾರ್ಥಿಗಳು ಪವಿತ್ರ ಗುಹೆಯ ದರ್ಶನ ಪಡೆದರು. ಈಗ ಬಾಲ್ಟಾಲ್ ಭಾಗದಲ್ಲೂ ಪರಿಸ್ಥಿತಿ ಸುಧಾರಿಸಿದ