ನವದೆಹಲಿ : ರಾಷ್ಟ್ರೀಯ ಶಿಕ್ಷಣ ಕರಡು ನೀತಿಯನ್ನು ಪರಿಷ್ಕರಿಸಿದ ಕೇಂದ್ರ ಸರ್ಕಾರ ಇದೀಗ ಹಿಂದಿ ಭಾಷಾ ಕಲಿಕೆ ಕಡ್ಡಾಯವಲ್ಲ ಎಂದು ಹೇಳಿದೆ. ಈ ಮೊದಲು ಕೇಂದ್ರ ಸರ್ಕಾರ ಸ್ಥಳೀಯ ಭಾಷೆ ಜೊತೆಗೆ ಹಿಂದಿ ಕಲಿಕೆ ಕಡ್ಡಾಯ ಎಂದು ತಿಳಿಸಿತ್ತು. ಇದರಿಂದ ಮಕ್ಕಳ ಮೇಲೆ ಹೆಚ್ಚಿನ ಒತ್ತಡ ಬೀಳುವುದರಿಂದ ತಮಿಳುನಾಡು, ಕರ್ನಾಟಕ, ಕೇರಳದಲ್ಲಿ ರಾಜಕೀಯ ನಾಯಕರು ಹಿಂದಿ ಭಾಷೆ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ರಾಷ್ಟ್ರೀಯ ಶಿಕ್ಷಣ ಕರಡು