ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಇಂದು ಹೊಸ ವಾಹನಗಳಿಗೆ ಹೊಸ ನೋಂದಣಿ ಗುರುತು ಪರಿಚಯಿಸಿದೆ. ಭಾರತ್ ಸರಣಿ (ಬಿಹೆಚ್-ಸರಣಿ) ಇದಾಗಿದ್ದು, ಮಾಲೀಕರು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸ್ಥಳಾಂತರಗೊಂಡಾಗ ಬಿಹೆಚ್ ಗುರುತು ಹೊಂದಿರುವ ವಾಹನಕ್ಕೆ ಹೊಸ ನೋಂದಣಿ ಗುರುತು ಅಗತ್ಯವಿಲ್ಲ. ಈ ಸೌಲಭ್ಯವು ರಕ್ಷಣಾ ಸಿಬ್ಬಂದಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಉದ್ಯೋಗಿಗಳಿಗೆ ಸ್ವಯಂಪ್ರೇರಿತ ಆಧಾರದ ಮೇಲೆ ಲಭ್ಯವಿರುತ್ತದೆ. ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳಿಗೆ ವಾಹನ