ದೆಹಲಿ : ಬಳ್ಳಾರಿ ಜಿಲ್ಲೆಯ ಗಣಿ ಉದ್ಯಮಿ, ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಗವಿಯಪ್ಪ ಹಾಗೂ ಕಾರ್ತಿಕೇಯ ಘೋರ್ಪಡೆ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಸಂಸದ ಶ್ರೀರಾಮುಲು ಅವರ ಜೊತೆ ಪಕ್ಷದ ಕಚೇರಿಗೆ ಆಗಮಿಸಿದ ಗವಿಯಪ್ಪ ಹಾಗೂ ಮಾಜಿ ಸಚಿವ ಎಂ.ವೈ. ಘೋರ್ಪಡೆ ಪುತ್ರರಾಗಿರುವ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಾರ್ತಿಕೇಯ ಅವರು ರಾಜ್ಯ ಬಿಜೆಪಿ ಉಸ್ತುವಾರಿ ಪ್ರಕಾಶ್ ಜಾವೇಡ್ಕರ್, ಕೇಂದ್ರ ಸಚಿವ ಅನಂತ್ ಕುಮಾರ್, ಸಚಿವ