ಮುಂಬೈ : ಇಂದು ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಯ ಮತಏಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಫಲಿತಾಂಶಕ್ಕೂ ಮೊದಲೇ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವರ್ , ಮತಗಟ್ಟೆಯ ಸಮೀಕ್ಷೆಗಳು ಸುಳ್ಳಾಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ. ಮತಗಟ್ಟೆಯ ಸಮೀಕ್ಷೆಗಳ ಪ್ರಕಾರ ಈ ಬಾರಿಯೂ ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಹೇಳಿದೆ. ಆದರೆ ಈ ಬಗ್ಗೆ ಮಾತನಾಡಿದ ಶರದ್ ಪವಾರ್, ರಾಜ್ಯದಲ್ಲಿ