Widgets Magazine

ನಿತ್ಯಾನಂದನ ಬಂಧನಕ್ಕೆ ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್

ನವದೆಹಲಿ| pavithra| Last Updated: ಭಾನುವಾರ, 29 ಡಿಸೆಂಬರ್ 2019 (10:07 IST)
ನವದೆಹಲಿ : ಅತ್ಯಾಚಾರ ಆರೋಪಿ, ಸ್ವಯಂಘೋಷಿತ ದೇವಮಾನವ ನಿತ್ಯಾನಂದನ ಬಂಧನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ.ನಿತ್ಯಾನಂದನ ವಿರುದ್ಧ ದೂರು ನೀಡಿದ್ದ ಮಹಿಳೆ ಹಾಗೂ ತಮಿಳುನಾಡಿನಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ ಸಂಗೀತಾ ತಾಯಿ ಇಬ್ಬರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ  ನಿತ್ಯಾನಂದನ ವಿರುದ್ಧ ಬರೆದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ನಿತ್ಯಾನಂದನ ಬಂಧನಕ್ಕೆ ಅಗತ್ಯ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.


ಈ ಬಗ್ಗೆ  ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ತನಿಖಾ ಎಜೆನ್ಸಿ ಹಾಗೂ ಸರ್ಕಾರದಿಂದ ಅಗತ್ಯ ದಾಖಲೆ ಸಲ್ಲಿಸುವಂತೆ ಕೇಂದ್ರ ಸರ್ಕಾರ ಪತ್ರ ಬರೆದಿದೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :