ನಾಳೆ ಕೇಂದ್ರ ಚುನಾವಣೆ ಆಯೋಗ ಗುಜರಾತ್ ವಿಧಾನಸಭೆ ಚುನಾವಣೆ ದಿನಾಂಕ ಘೋಷಿಸಲಿದೆ ಎಂದು ಆಯೋಗದ ಮೂಲಗಳು ತಿಳಿಸಿವೆ. ದೇಶದ ಚುನಾವಣೆ ಇತಿಹಾಸದಲ್ಲಿಯೇ ಗುಜರಾತ್ ವಿಧಾನಸಭೆ ಚುನಾವಣೆ ಭಾರಿ ಗಮನ ಸೆಳೆದಿದ್ದು, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿದೆ. ಕಳೆದ 22 ವರ್ಷಗಳಿಂದ ಅಧಿಕಾರದಿಂದ ದೂರವಿರುವ ಕಾಂಗ್ರೆಸ್ ಈ ಬಾರಿ ನಮ್ಮದೇ ಸರಕಾರ ಎನ್ನುವ ರೀತಿಯಲ್ಲಿ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಮುಂದಾಗಿದೆ.