ಗುಜರಾತ್: ರಾಜ್ಯ ವಿಧಾನಸಭೆ ಚುನಾವಣೆ ಗೆಲುವನ್ನು ಪ್ರತಿಷ್ಟೆಯಾಗಿ ಪರಿಗಣಿಸಿರುವ ಬಿಜೆಪಿ ಶತಾಯಗತಾಯ ಗೆಲ್ಲುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪಕ್ಷದ ಗೆಲುವಿಗಾಗಿ ಪ್ರಧಾನಿ ಮೋದಿಯವರನ್ನು ನೆಚ್ಚಿಕೊಂಡಿದೆ. ಡಿಸೆಂಬರ್ನಲ್ಲಿ ನಡೆಯಲಿರುವ ಚುನಾವಣೆಗೆ 50 ರಿಂದ 70 ಬಹಿರಂಗ ಸಭೆ ಆಯೋಜಿಸಿ ಪ್ರಧಾನಿಯಿಂದ ಮತಯಾಚನೆ ಮಾಡಲು ಬಿಜೆಪಿ ಪ್ಲ್ಯಾನ್ ಮಾಡಿದೆ. ದಕ್ಷಿಣ ಗುಜರಾತ್, ಸೌರಾಷ್ಟ್ರ, ಕಚ್ ಮತ್ತು ಸೆಂಟ್ರಲ್ ಗುಜರಾತ್ಗಳಲ್ಲಿ ಪ್ರಧಾನಿ ಮೋದಿ 50ರಿಂದ 70 ಬಹಿರಂಗ ಸಭೆ ಉದ್ದೇಶಿಸಿ ಬಿಜೆಪಿ ಪರ ಮತಯಾಚಿಸಲಿದ್ದಾರೆ.ನ.