ಬೆಂಗಳೂರು : ವಾಯುಪಡೆಯ ಪೈಲಟ್ಗಳ ಎರಡನೇ ಹಂತದ ತರಬೇತಿಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವಿನ್ಯಾಸ ಮಾಡಿ ಅಭಿವೃದ್ಧಿಪಡಿಸಿರುವ ಇಂಟರ್ಮೀಡಿಯೇಟ್ ಜೆಟ್ ಟ್ರೈನರ್ (ಐಜೆಟಿ) ಗುರುವಾರ ತನ್ನ ಗಿರಿಗಿಟ್ಲೆ (ಸ್ಪಿನ್) ಹಾಕುವ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಈ ವಿಮಾನವು ಈ ಹಿಂದೆ ಎತ್ತರ ಹಾರುವ ಪರೀಕ್ಷೆ, ವೇಗ, ಭಾರ ಹೊರುವಿಕೆ, ಶಸ್ತ್ರಾಸ್ತ್ರ ಬಳಕೆ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಿತ್ತು. ಆದರೆ 2016ರಲ್ಲಿ ನಡೆದ ಸ್ಪಿನ್ ಪರೀಕ್ಷೆಯಲ್ಲಿ ವಿಫಲವಾಗಿತ್ತು. ಆದ್ದರಿಂದ ಯೋಜನೆಗೆ ದೊಡ್ಡ ಹಿನ್ನಡೆಯಾಗಿತ್ತು.ಪರೀಕ್ಷೆಯಲ್ಲಿ ವಿಫಲಗೊಂಡ