ಜಾರ್ಖಂಡ್ನ ಹಜರಿಬಾಗ್ ರೈಲ್ವೆ ನಿಲ್ದಾಣದಲ್ಲಿ ಅವಳಿ ಸ್ಫೋಟ ಸಂಭವಿಸಿದ್ದು, ಬಾಲಕನೊಬ್ಬನ ಕೈ ಸುಟ್ಟುಹೋಗಿರುವ ಘಟನೆ ನಡೆದಿದೆ. ರೈಲ್ವೆ ನಿಲ್ದಾಣದಲ್ಲಿ ಜನಜಂಗುಳಿ ಮಧ್ಯೆ ಎರಡು ಸ್ಫೋಟಗಳು ಸಂಭವಿಸಿವೆ. ಸ್ಫೋಟದ ರಭಸಕ್ಕೆ ಜನರು ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಈ ಸ್ಫೋಟದಲ್ಲಿ ಓರ್ವ ಬಾಲಕ ತನ್ನ ಬಲಗೈ ಕಳೆದುಕೊಂಡಿದ್ದು, ಧನ್ಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಫೋಟಕ್ಕೆ ಕಾರಣವಾದ ವಸ್ತುವನ್ನು ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ನಲ್ಲಿ ಸುತ್ತಿ ಎಸೆಯಲಾಗಿತ್ತು ಎಂದು ಪ್ರತ್ಯಕ್ಷ