ನವದೆಹಲಿ : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಇನ್ನು ಮುಂದೆ ಸಂಸದೀಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳುವುದರ ಮೂಲಕ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಇನ್ನುಮುಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಆದರೆ ಯುವಕರನ್ನು ತಯಾರು ಮಾಡುತ್ತೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಅವರು, ಕರ್ನಾಟಕದಲ್ಲಿ ಇರುವ ಮೈತ್ರಿ ಸರ್ಕಾರವನ್ನು ಬೀಳಿಸಿ ನೋಡೋಣ ಎಂದು ಬಿಜೆಪಿಗೆ ಸವಾಲೆಸೆದಿದ್ದಾರೆ. ಹಾಗೇ ನಮ್ಮ ಮಗ ಕುಮಾರಸ್ವಾಮಿ ಮುಖ್ಯಮಂತ್ರಿ ಆದ