ಬೆಂಗಳೂರು : ಕೆಲ ದಿನಗಳಿಂದ ಅಶಾಂತಿ ಬೇಗುದಿಯಲ್ಲಿ ಬೇಯುತ್ತಿರುವ ಕರ್ನಾಟಕ ರಾಜ್ಯವು ಒಂದು ತಿಂಗಳ ಒಳಗಾಗಿ ಸಹಜ ಸ್ಥಿತಿಗೆ ಮರಳದೇ ಇದ್ದರೆ ಶಾಂತಿ,ಸಾಮರಸ್ಯ, ಸೌಹಾರ್ದ ಹಾಗೂ ಸಾಮರಸ್ಯ ಕರ್ನಾಟಕದ ಪುನರ್ ಸ್ಥಾಪನೆಗಾಗಿ ರಾಜ್ಯವ್ಯಾಪಿ ಪಾದಯಾತ್ರೆ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.ಬೆಂಗಳೂರಿನ ಗಾಂಧಿ ಭವನದಲ್ಲಿ ಜೆಪಿ ವಿಚಾರ ವೇದಿಕೆ ಹಮ್ಮಿಕೊಂಡಿದ್ದ ಸರ್ವ ಜನಾಂಗದ ಶಾಂತಿಯ ತೋಟ – ಕರ್ನಾಟಕ ಒಂದು ಭಾವೈಕ್ಯ ಚರ್ಚೆಯಲ್ಲಿ ಪಾಲ್ಗೊಂಡು ಅವರು