ಪಾಲ್ಘರ್ : ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸಾರ್ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಪೇಂಟ್ ಮತ್ತು ರಾಸಾಯನಿಕಗಳನ್ನು ತಯಾರಿಸುವ ಕಾರ್ಖಾನೆಯು ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೋಯಿಸಾರ್ನ ತಾರಾಪುರ ಎಂಐಡಿಸಿ (ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ ನಿಗಮ)ಯಲ್ಲಿರುವ ಘಟಕದಲ್ಲಿ ಬೆಳಗಿನ ಜಾವ 2 ಗಂಟೆಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ವಿವೇಕಾನಂದ ಕದಂ ತಿಳಿಸಿದ್ದಾರೆ. ದೊಡ್ಡದಾಗಿಯೇ ಬೆಂಕಿ