ನವದೆಹಲಿ : ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರಿ ಮಳೆಯ ಎಚ್ಚರಿಕೆಯನ್ನು ನೀಡಿದೆ.