ಬದ್ರಿನಾಥ್: ಯಾತ್ರಾಸ್ಥಳ ಬದ್ರಿನಾಥ್ ನಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು, ಘಟನೆಯಲ್ಲಿ ಓರ್ವ ಇಂಜಿನಿಯರ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಚಾಪರ್ ನಲ್ಲಿ ಒಟ್ಟು 8 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇದರಲ್ಲಿ ಐವರು ಪ್ರಯಾಣಿಕರು, ಇಬ್ಬರು ಪೈಲಟ್ ಗಳು ಹಾಗೂ ಓರ್ವ ಇಂಜಿನಿಯರ್ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪೈಕಿ ಹೆಲಿಕಾಪ್ಟರ್ನ ಇಂಜಿನಿಯರ್ ಮೃತಪಟ್ಟರೆ, ಇಬ್ಬರು ಪೈಲಟ್ ಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತ ಇಂಜಿನಿಯರ್ ನನ್ನು