ಚೆನ್ನೈ : ಶುದ್ಧತೆ ಮತ್ತು ಪಾವಿತ್ರ್ಯತೆ ಕಾಪಾಡಲು ರಾಜ್ಯದ ಎಲ್ಲ ದೇವಸ್ಥಾನದ ಆವರಣದ ಒಳಗಡೆ ಮೊಬೈಲ್ ಫೋನ್ ಮತ್ತು ಕ್ಯಾಮೆರಾವನ್ನು ನಿಷೇಧಿಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮಧುರೈ ಪೀಠದ ನ್ಯಾಯಮೂರ್ತಿಗಳಾದ ಆರ್ ಮಹದೇವನ್ ಮತ್ತು ಜೆ ಸತ್ಯನಾರಾಯಣ ಅವರಿದ್ದ ದ್ವಿಸದಸ್ಯ ಪೀಠವು ಭಕ್ತರು ಮತ್ತು ದೇವಾಲಯಗಳಿಗೆ ಭೇಟಿ ನೀಡುವವರು ಯೋಗ್ಯವಾದ ವಸ್ತ್ರ ಸಂಹಿತೆಯನ್ನು ಪಾಲಿಸುವಂತೆ ಸೂಚಿಸಿ ಎಂದು ರಾಜ್ಯಕ್ಕೆ ನಿರ್ದೇಶನ ನೀಡಿದೆ.ತೂತುಕುಡಿ ಜಿಲ್ಲೆಯ ಪುರಾತನ