ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈಕೋರ್ಟ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಛೀಮಾರಿ ಹಾಕಿದೆ. ಸೂಕ್ತವಾದ, ಸರಿಯಾದ ರೀತಿಯಲ್ಲಿ ಅಧಿಕಾರ ನಡೆಸಿ. ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವತ್ತ ಗಮನಹರಿಸಿ. ಪೊಲೀಸರ ದುರ್ಬಲ ತನಿಖೆಯಿಂದಾಗಿ ಅಪರಾಧಿಗಳು ಕಾನೂನಿನ ಚೌಕಟ್ಟು ಮೀರುತ್ತಿದ್ದಾರೆ ಎಂದು ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ, ಅತ್ಯಾಚಾರ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿವೆ. ಪೊಲೀಸ್ ಇಲಾಖೆ ಕೂಡಾ ಅಪರಾಧಿಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದೆ.