ನವದೆಹಲಿ : ಶಾಲಾ ವಿದ್ಯಾರ್ಥಿಗಳನ್ನು ಕರ್ನಾಟಕ ಹೈಕೋರ್ಟ್ ಕೈದಿಗಳಿಗೆ ಹೋಲಿಸಿದೆ. ಜೈಲಿನಲ್ಲಿ ಕೈದಿಗಳಿಗೆ ಯಾವುದೇ ಹಕ್ಕುಗಳು ಇರುವುದಿಲ್ಲ, ಅದೇ ರೀತಿ ಶಾಲೆಗಳಿಗೆ ತೆರಳಿದಾಗ ಮಕ್ಕಳು ಶಿಕ್ಷಕರ ಕಸ್ಟಡಿಯಲ್ಲಿ ಇರುತ್ತಾರೆ.ಅವರಿಗೂ ಹಕ್ಕುಗಳು ಇರುವುದಿಲ್ಲ ಎಂದು ಹೇಳಿದೆ. ಇದನ್ನು ಕೇಳಿ ನನಗೆ ಆಶ್ಚರ್ಯವಾಗಿದೆ. ಒಂದು ನ್ಯಾಯಾಂಗ ಸಂಸ್ಥೆಯಾಗಿ ಹೈಕೋರ್ಟ್ ಇದನ್ನೆಲ್ಲ ಹೇಗೆ ಹೇಳುತ್ತದೆ? ಎಂದು ಹಿರಿಯ ವಕೀಲ ದೇವದತ್ ಕಾಮತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ ನಿಷೇಧಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ