ಹೈದ್ರಾಬಾದ್: ಆಘಾತಕಾರಿ ಘಟನೆಯೊಂದರಲ್ಲಿ ಹೈದ್ರಾಬಾದ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತರಲಾಗಿದೆ ಎಂದು ಮೂಲಗಳು ತಿಳಿಸಿವೆ. ಯಲ್ಲೋ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಸ್ಲೀಪರ್ ಬಸ್ನಲ್ಲಿದ್ದ ಪ್ರಯಾಣಿಕರು ಕೂದಲೆಳೆಯ ಅಂತರದಲ್ಲಿ ತಪ್ಪಿಸಿಕೊಂಡಿದ್ದು ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಶಾರ್ಟ್ಸರ್ಕ್ಯೂಟ್ ಅಗ್ನಿ ಅಕಸ್ಮಿಕಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಹೈದ್ರಾಬಾದ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಎನಗುಮರ್ರಿ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪ್ರಯಾಣಿಕರು ಬಸ್ನಿಂದ