ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ಮೇಲೆ ದಾಳಿ ನಡೆಸಲು ಪಾಕ್ ಪ್ರೇರಿತ ಉಗ್ರರು ಹೊಸ ತಂತ್ರ ಕಂಡುಕೊಂಡಿದ್ದಾರೆ. ಪದೇ ಪದೇ ಡ್ರೋನ್ ಮೂಲಕ ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ಭಾರತೀಯ ಸೇನೆಯೂ ತಕ್ಕ ಎದಿರೇಟು ನೀಡಿದೆ. ಆದರೆ ಉಗ್ರರಿಗೆ ಸ್ಪೋಟಕ ತುಂಬಿದ ಡ್ರೋನ್ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ಪ್ರಶ್ನೆ ಶುರುವಾಗಿದೆ. ಈ ಬಗ್ಗೆ ಈಗಾಗಲೇ ಭಾರತ ವಿಶ್ವಸಂಸ್ಥೆ ಮುಂದೆ ಕಳವಳ ವ್ಯಕ್ತಪಡಿಸಿದೆ.ಪಾಕಿಸ್ತಾನ