ನವದೆಹಲಿ : ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ 273 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನುದಾನ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಉತ್ತರ ಕರ್ನಾಟಕದ ಜನತೆ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ವಿಮಾನ ನಿಲ್ದಾಣದ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಪ್ರಸ್ತಾವನೆಗೆ