ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ತಮ್ಮ ರಾಜ್ಯದ ಉಪರಾಜ್ಯಪಾಲರ ಜತೆ ಸದಾ ಕಚ್ಚಾಟ ನಡೆಸುತ್ತಲೇ ಕಾಣಿಸಿಕೊಳ್ಳುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬಹುದೊಡ್ಡ ಹಿನ್ನಡೆಯಾಗಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಲೆಫ್ಟಿನೆಂಟ್ ಗವರ್ನರ್ (ಎಲ್ಜಿ) ಅವರ ಅಧಿಕಾರಗಳನ್ನು ಪ್ರಶ್ನಿಸಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾ ಮಾಡಿದ್ದು, ‘ಲೆಫ್ಟಿನೆಂಟ್ ಗವರ್ನರ್ ರಾಜ್ಯ ಸಚಿವ ಸಂಪುಟದ ಸೂಚನೆಯಂತೆ ಕಾರ್ಯ ನಿರ್ವಹಿಸಬೇಕು ಎನ್ನುವುದು ಒಪ್ಪತಕ್ಕದ್ದಲ್ಲ ಎಂದು ಹೇಳಿದೆ.