ಲಕ್ನೋ: ಹೆಂಡತಿ ಕೊಲೆಯಾದ ಬಳಿಕ ಗಂಡ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ.ಗಂಡ ಹಲವು ಸಮಯದಿಂದ ಹೆಂಡತಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಹೀಗಾಗಿ ಆತನೇ ಹೆಂಡತಿಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿರಬಹುದು ಎಂದು ಅನುಮಾನಿಸಲಾಗಿದೆ.ಈ ಬಗ್ಗೆ ಮಹಿಳೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯ ದೇಹದ ಮೇಲೆ ಹಲವು ಬಾರಿ ಚಾಕುವಿನಿಂದ ಇರಿದ ಗಾಯಗಳಿವೆ. ಪೊಲೀಸರು ಈಗ ಆರೋಪಿ ಗಂಡನಿಗಾಗಿ ಹುಡುಕಾಟ ನಡೆಸಿದ್ದಾರೆ.