ಪತ್ನಿಯೊಂದಿಗೆ ಸಂಬಂಧ ಹೊಂದಿದ್ದ ವ್ಯಕ್ತಿಗೆ ವಿಷ ಹಾಕಿ ಕೊಂದ ಪತಿ

ಅಹಮದಾಬಾದ್| pavithra| Last Modified ಗುರುವಾರ, 8 ಏಪ್ರಿಲ್ 2021 (09:06 IST)
ಅಹಮದಾಬಾದ್ : ತನ್ನ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದ 40 ವರ್ಷದ ವ್ಯಕ್ತಿಗೆ ಆಹಾರದಲ್ಲಿ ಬೆರೆಸಿ ತಿನ್ನಿಸಿ ಕೊಲೆ ಮಾಡಿದ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ.

ಸಂತ್ರಸ್ತ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದ ಮಹಿಳೆಯ ಪತಿ ಈ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಇದಕ್ಕೆ ಹೆದರದ ಸಂತ್ರಸ್ತ ಮಹಿಳೆಯ ಕುಟುಂಬದವರ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಿದ್ದ. ಹೀಗಾಗಿ ಆತನನ್ನು ಕೊಲೆ ಮಾಡಲು ನಿರ್ಧರಿಸಿದ ಮಹಿಳೆಯ ಕುಟುಂಬಸ್ಥರು ಆತನನ್ನು ಪಾರ್ಟಿಗೆ ಕರೆದು  ಆಹಾರದಲ್ಲಿ ವಿಷ ಬೆರೆಸಿ ತಿನ್ನಿಸಿದ್ದಾರೆ. ಇದರಿಂದ ಆತ ಸಾವನ್ನಪ್ಪಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿ ಮಹಿಳೆಯ ಕುಟುಂಬದ ಐವರನ್ನು ಬಂಧಿಸಿದ್ದಾರೆ  ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :