ಕೋಲ್ಕತ್ತಾ : ತನ್ನ ಕುಟುಂಬಸ್ಥರ ವಿರೋಧದ ನಡುವೆಯೂ 10ನೇ ತರಗತಿ ಪರೀಕ್ಷೆ ಬರೆದಳು ಎಂಬ ಒಂದೇ ಕಾರಣಕ್ಕೆ ಆಕ್ರೋಶಗೊಂಡ ಪತಿ ಮಹಾಶಯ ಅಪ್ರಾಪ್ತ ಪತ್ನಿ ಮೇಲೆ ಆ್ಯಸಿಡ್ ಎರಚಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಈ ಘೋರ ಘಟನೆ ನಡೆದಿದ್ದು, ಪರೀಕ್ಷಾ ಕೇಂದ್ರದ ಎದುರೇ ಪಾಪಿ ಪತಿ ಪತ್ನಿ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ.ಘಟನೆಯಲ್ಲಿ ಪತ್ನಿಯ ಮುಖ ಮತ್ತು ದೇಹದ ಮೇಲ್ಭಾಗದಲ್ಲಿ ತೀವ್ರ ಸುಟ್ಟ ಗಾಯಗಳಾಗಿದ್ದು,