ನಗರದ ಹೊರವಲಯದಲ್ಲಿ ಪಿಯುಸಿ ಓದುತ್ತಿರುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು ಆಕೆಯ ಪ್ರಿಯಕರನೇ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಗುರುತಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ, ಪೊಲೀಸರು ಮದೀನಾಗುಡದ ಅಮೀನ್ಪುರ್ ಬೆಟ್ಟದಲ್ಲಿ ವಿದ್ಯಾರ್ಥಿನಿ ಚಾಂದನಿ ಜೈನ್ ಕೊಳೆತ ಮೃತದೇಹವನ್ನು ವಶಕ್ಕೆ ಪಡೆದುಕೊಂಡು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದಾರೆ. ಮಾರನೇ ದಿನವೇ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಿಯಾಪುರ್ ಪ್ರದೇಶದ 17 ವರ್ಷದ ಬಾಲಕಿಯೊಬ್ಬಳು ಎರಡು ದಿನಗಳಿಂದ ಕಾಣೆಯಾಗಿದ್ದಳು.