ಲಖನೌ: ಯೋಧರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿರುವ ಸಮಾಜವಾದಿ ಪಕ್ಷದ ನಾಯಕ ಅಜಂಖಾನ್, ನಾನು ಬಿಜೆಪಿಯ ಐಟಂ ಗರ್ಲ್ ಆಗಿದ್ದೇನೆ. ಕಾರಣ ಯಾವಾಗಲೂ ಬಿಜೆಪಿ ನನ್ನ ಹೇಳಿಕೆಗಳನ್ನು ಹಿಡಿದುಕೊಂಡು ರಾಜಕೀಯ ಮಾಡುತ್ತಿರುತ್ತದೆ ಎಂದು ಕಿಡಿಕಾರಿದ್ದಾರೆ. ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಆಜಂ ಖಾನ್, ಭಾರತೀಯ ಸೇನೆ ಕುರಿತಂತೆ ನಾನು ನೀಡಿದ್ದ ಹೇಳಿಕೆಗಳನ್ನು ಮಾಧ್ಯಮಗಳು ತಿರುಚಿವೆ ಎಂದು ಹೇಳಿದ್ದಾರೆ. ಅಲ್ಲದೇ ನಾನೀಗ ಬಿಜೆಪಿಯ ಐಟಂ ಗರ್ಲ್; ಅವರಿಗೆ