ಬಿಜೆಪಿ ನಾಯಕರು ನನ್ನ ಗೌರವಕ್ಕೆ ಧಕ್ಕೆ ತರಲು ಸೆಕ್ಸ್ ಸಿಡಿ ಬಿಡುಗಡೆ ಮಾಡುತ್ತಿದ್ದಾರೆ. ನಾನು ಕೂಡಾ ಬಿಜೆಪಿ ನಾಯಕರ ಸಿಡಿ ಬಿಡುಗಡೆ ಮಾಡ್ತೇನೆ. ಆದರೆ, ಅಂತಹ ಕೀಳ ರಾಜಕೀಯ ಮಾಡಬಾರದು ಎನ್ನುವ ಕಾರಣಕ್ಕೆ ಬಿಡುಗಡೆ ಮಾಡ್ತಿಲ್ಲ ಎಂದು ಪಟಿದಾರ್ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಗುಡುಗಿದ್ದಾರೆ. ಗುಜರಾತ್ನಲ್ಲಿ ನಡೆಯಲಿರುವ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸೋಲುವುದು ಖಚಿತ. ಬಿಜೆಪಿ 60 ಸೀಟುಗಳಲ್ಲಿ ಕೂಡಾ ಗೆಲುವು ಸಾಧಿಸುವುದಿಲ್ಲ ಎಂದು ಭವಿಷ್ಯ ನುಡಿದ್ದಾರೆ.