ನಾನು ಚೌಕಿದಾರ್ ಆಗಲ್ಲ-ಮೋದಿಗೆ ಟಾಂಗ್ ನೀಡಿದ ಬಿಜೆಪಿ ಸಂಸದ

ನವದೆಹಲಿ, ಸೋಮವಾರ, 25 ಮಾರ್ಚ್ 2019 (06:52 IST)

ನವದೆಹಲಿ : ಭಾರತದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರತಿಯೊಬ್ಬರು ಚೌಕಿದಾರರೇ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ನಾನು ಚೌಕಿದಾರ್ ಅಲ್ಲ, ಬ್ರಾಹ್ಮಣ ಎಂದು ಹೇಳುವುದರ ಮೂಲಕ ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ.


ಪ್ರಧಾನಿ ಮೋದಿ ಅವರು ಮಾರ್ಚ್ 16ರಂದು `ನಾನೂ ಕೂಡ ಚೌಕಿದಾರ’ #MainBhiChowkidar ಎಂದು ಹೇಳಿ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿ ಜೊತೆಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿರುವ ಹೆಸರಿನ ಮುಂದೆ `ಚೌಕಿದಾರ’ ಎಂದು ಸೇರಿಸಿಕೊಂಡಿದ್ದರು. ಮೋದಿ ಹೆಸರು ಬದಲಾಯಿಸಿದ ಬೆನ್ನಲ್ಲೇ ಬಿಜೆಪಿ ನಾಯಕರು ಮತ್ತು ಮೋದಿ ಅಭಿಮಾನಿಗಳು ತಮ್ಮ ಹೆಸರಿನ ಮುಂದೆ ಚೌಕಿದಾರ ಎಂದು ಸೇರಿಸಿದ್ದಾರೆ.


ಆದರೆ ತಮಿಳು ವಾಹಿನಿಯೊಂದರ ಸಂದರ್ಶನದಲ್ಲಿ, ನಿಮ್ಮ ಟ್ವೀಟ್ ಖಾತೆಯ ಹೆಸರಿನ ಮುಂದೆ ಚೌಕಿದಾರ್ ಅಂತ ಯಾಕೆ ಸೇರಿಸಿಲ್ಲ ಎಂದು ವರದಿಗಾರರು  ಸುಬ್ರಮಣಿಯನ್ ಸ್ವಾಮಿಯನ್ನು  ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಚೌಕಿದಾರ್ ಆಗುವುದಿಲ್ಲ. ಯಾಕೆಂದರೆ ನಾನು ಬ್ರಾಹ್ಮಣ. ಹೀಗಾಗಿ ಬ್ರಾಹ್ಮಣರು ಚೌಕಿದಾರ್ ಆಗಲು ಸಾಧ್ಯವಿಲ್ಲ. ಇದು ಸತ್ಯ ಕೂಡ ಎಂದು ಹೇಳಿದ್ದಾರೆ.


ಚೌಕಿದಾರ್ ಏನು ಮಾಡಬೇಕು ಎನ್ನುವ ಆದೇಶವನ್ನು ನಾನು ನೀಡುತ್ತೇನೆ. ನಾವು ಹೇಳಿದಂತೆ ಚೌಕಿದಾರ್ ಕೇಳಬೇಕೆಂದು ಎಲ್ಲರೂ ಅಂದುಕೊಳ್ಳುತ್ತಾರೆ. ಹೀಗಾಗಿ ನಾನು ಚೌಕಿದಾರ್ ಆಗಲ್ಲ ಎಂದು ಸುಬ್ರಹ್ಮಣ್ಯಸ್ವಾಮಿ ತಿಳಿಸಿದ್ದಾರೆ. ಸಂಸದರ ಸಂದರ್ಶನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಹುಲ್ ಗಾಂಧಿ ಡ್ಯಾನ್ಸರ್ ಸಪ್ನಾ ಚೌಧರಿಯನ್ನ ಮದ್ವೆ ಆಗಲಿ- ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

ಲಕ್ನೋ : ಸದಾ ವಿವಾದಾತ್ಮಕ ಹೇಳಿಕೆಗಳಿಂದಲ್ಲೇ ಸುದ್ದಿಯಾಗುತ್ತಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ...

news

ಎರಡು ಕ್ಷೇತ್ರವನ್ನು ಮೊಮ್ಮಕ್ಕಳಿಗೆ ಬಿಟ್ಟುಕೊಟ್ಟು ತುಮಕೂರಿನಲ್ಲಿ ಸ್ಪರ್ಧಿಸಲು ಬಂದ ದೇವೇಗೌಡರ ವಿರುದ್ಧ ಕಿಡಿಕಾರಿದ ಸಿ.ಎಂ.ಲಿಂಗಪ್ಪ

ರಾಮನಗರ : ಮಂಡ್ಯ , ಹಾಸನ ಎರಡು ಕ್ಷೇತ್ರವನ್ನು ಇಬ್ಬರು ಮೊಮ್ಮಕ್ಕಳಿಗೆ ಬಿಟ್ಟುಕೊಟ್ಟು ತುಮಕೂರಿನಲ್ಲಿ ...

news

ಎಐಸಿಸಿ ಅಧ್ಯಕ್ಷರ ಆಸ್ತಿ ಲೆಕ್ಕಕ್ಕೆ ಸಿಗೋದಿಲ್ವಂತೆ!

ಪ್ರಧಾನಿ ನರೇಂದ್ರ ಮೋದಿಯವರ ಒಟ್ಟು ಸ್ಥಿರಾಸ್ತಿ ‌ಎರಡು ಲಕ್ಷ‌ ಹದಿನಾರು ಸಾವಿರ ಇದ್ದರೆ, ರಾಷ್ಟ್ರೀಯ ...

news

ಡಿ ಬಾಸ್ ಪರ ಘೋಷಣೆ ಕೂಗಿದವರ ಕಥೆ ಏನಾಯ್ತು?

ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರದ ವೇಳೆ ಕಲ್ಲು ತೂರಾಟ ಮತ್ತು ಸಭೆಯಲ್ಲಿ ಡಿ ಬಾಸ್ ಘೋಷಣೆ ಕೂಗಿದ ...