Widgets Magazine

ನಿರ್ಭಯ ಪ್ರಕರಣ; ಅಪರಾಧಿಗಳ ಗಲ್ಲುಶಿಕ್ಷೆ ದಿನಾಂಕ ಮುಂದೂಡಿಕೆ

ನವದೆಹಲಿ| pavithra| Last Modified ಗುರುವಾರ, 16 ಜನವರಿ 2020 (06:51 IST)
ನವದೆಹಲಿ : ನಿರ್ಭಯ ಪ್ರಕರಣದ ನಾಲ್ವರು ಅಪರಾಧಿಗಳಿಗೆ ವಿಧಿಸಿದ ಗಲ್ಲುಶಿಕ್ಷೆ ದಿನಾಂಕ ಮುಂದೂಡಿಕೆ ಆಗಲಿದೆ ಎಂಬುದಾಗಿ ತಿಳಿದುಬಂದಿದೆ.ಪಟಿಯಾಲ ಹೌಸ್ ಕೋರ್ಟ್ ಜನವರಿ 22ರ ಬೆಳಿಗ್ಗೆ ಏಳು ಗಂಟೆಗೆ ನಾಲ್ವರಿಗೆ ಗಲ್ಲು ಶಿಕ್ಷೆ ವಿಧಿಸಿ ಡೆತ್ ವಾರೆಂಟ್ ಜಾರಿ ಮಾಡಿತ್ತು. ಆದರೆ ಇದೀಗ ಅಪರಾಧಿ ಮುಕೇಶ್ ಗಲ್ಲು ಶಿಕ್ಷೆಯಿಂದ ಪಾರು ಮಾಡುವಂತೆ ರಾಷ್ಟ್ರಪತಿಗೆ ಕ್ಷಮಾದಾನದ ಅರ್ಜಿ ಸಲ್ಲಿಸಿದ್ದಾನೆ.


ಈ ಹಿನ್ನಲೆಯಲ್ಲಿ ರಾಷ್ಟ್ರಪತಿಗೆ ಸಲ್ಲಿಸಿದ ಕ್ಷಮಾದಾನದ ಅರ್ಜಿ ವಿಲೇವಾರಿಯಾಗುವವರೆಗೂ ಗಲ್ಲು ಶಿಕ್ಷೆ ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ್ ಹೈಕೋರ್ಟ್ ಗೆ ತಿಳಿಸಿದೆ ಎನ್ನಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :