ಗುಜರಾತ್ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ 89 ಸ್ಥಾನಗಳಿಗೆ ಮತದಾನದಲ್ಲಿ ಶೇ. 68ರಷ್ಟು ಮತಗಳು ಚಲಾವಣೆಯಾಗಿವೆ ಎಂದು ಚುನಾವಣಾ ಆಯುಕ್ತರು ಹೇಳಿದ್ದಾರೆ. ಮತದಾನ ಶಾಂತಿಯುತವಾಗಿ ನಡೆದಿದ್ದು, ಚುನಾವಣೆ ಶಾಂತಿಯುತವಾಗಿ ನಡೆಯಲು ಭದ್ರತಾ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಾಕಷ್ಟು ಶ್ರಮ ವಹಿಸಿದ್ದಾರೆ. ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಶೇ.30.31ರಷ್ಟು ಮತ ಚಲಾವಣೆಯಾಗಿದ್ದವು. ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆದಿತ್ತು. ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜ್ಕೋಟ್ನ