ದೇಶದ ಜನತೆ ಸೇನಾಪಡೆಗಳನ್ನು ಬೆಂಬಲಿಸುತ್ತದೆಯೇ ಹೊರತು ಉಗ್ರರನ್ನಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ. ಹಿಜ್ಬುಲ್ ಕಮಾಂಡರ್ ಬುರ್ಹಾನ್ ವನಿ ಎನ್ಕೌಂಟರ್ ನಂತರ ಕಾಶ್ಮಿರ ಕಣೆವೆಯಲ್ಲಿ ಉಂಟಾದ ಹಿಂಸಾಚಾರದಲ್ಲೆ 46 ಕ್ಕೂ ಹೆಚ್ಚು ಜನ ಮೃತರಾಗಿದ್ದಾರೆ. ಕಳೆದ 1994ರಲ್ಲಿ ಸಂಸತ್ತಿನಲ್ಲಿ ಪಿಓಕೆ ಭಾರತ ಮತ್ತು ಪಾಕಿಸ್ತಾನದ ಮಧ್ಯದ ವಿಷಯವಾಗಿದೆ ಎನ್ನುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಲಾಗಿತ್ತು ಎಂದು ತಿಳಿಸಿದ್ದಾರೆ. ಕಾಶ್ಮಿರದ ಬಗ್ಗೆ ಯಾವುದೇ ವಿವಾದವಿಲ್ಲ.