ನವದೆಹಲಿ : ರಷ್ಯಾ- ಉಕ್ರೇನ್ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತ ತಳೆದಿರುವ ತಟಸ್ಥ ನಿಲುವನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಯುದ್ಧದ ವಿಷಯದಲ್ಲಿ ಇಡೀ ವಿಶ್ವವೇ ಇಬ್ಭಾಗವಾಗಿದ್ದರೂ ಜಾಗತಿಕ ಒತ್ತಡಕ್ಕೆ ಮಣಿಯದೆ ತಟಸ್ಥ ಧೋರಣೆ ತಳೆಯುವ ಮೂಲಕ ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವಲ್ಲಿ ಭಾರತ ಯಶಸ್ವಿಯಾಗಿದೆ.ಇದು ಭಾರತ ಹಿಂದೆಂದಿಗಿಂತಲೂ ಹೆಚ್ಚು ಸದೃಢವಾಗಿದೆ ಎಂಬುದನ್ನು ತೋರಿಸುತ್ತಿದೆ ಎಂದು ಹೇಳಿದ್ದಾರೆ.ಬಿಜೆಪಿ 42ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಪಕ್ಷದ ಸಂಸದರು, ಶಾಸಕರು, ಕಾರ್ಯಕರ್ತರನ್ನು ಉದ್ದೇಶಿಸಿ