ನವದೆಹಲಿ: ಕೊರಾನ ಮಹಾಮಾರಿ ದಿನದಿನಕ್ಕೆ ತನ್ನ ಅಟ್ಟಹಾಸವನ್ನು ಮರೆಯುತ್ತಿದೆ. ಈ ಕಾರಣದಿಂದ ಪ್ರಧಾನ ಮಂತ್ರಿ ಮೋದಿಯವರು ಇಂದು ಮಧ್ಯರಾತ್ರಿಯಿಂದ ದೇಶಾದ್ಯಂತ ಲಾಕ್ ಡೌನ್ ಮಾಡುವುದಾಗಿ ಘೋಷಿಸಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮುಂದಿನ 21 ದಿನಗಳವರೆಗೆ ದೇಶದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.ಇಂದು ನೀವು ದೇಶದ ಯಾವುದೇ ಭಾಗದಲ್ಲಿದ್ದರೂ ಅಲ್ಲಿಯೇ ಉಳಿದುಕೊಳ್ಳಬೇಕು. ಮುಂದಿನ ಮೂರು ವಾರಗಳ ಕಾಲ ಭಾರತ ಸಂಪೂರ್ಣ ಲಾಕ್ ಡೌನ್ ಆಗಲಿದೆ ಎಂದು ಹೇಳಿದ್ದಾರೆ.