ನವದೆಹಲಿ : ಗಲ್ವಾನ್ನಲ್ಲಿ ಭಾರತೀಯ ಯೋಧರಿಂದ ಪೆಟ್ಟು ತಿಂದಿದ್ದ ಚೀನಾ ಮತ್ತೆ ತನ್ನ ಕುತಂತ್ರ ಬುದ್ಧಿಯನ್ನು ತೋರಿಸಿದೆ. ಅರುಣಾಚಲ ಪ್ರದೇಶದ ಗಡಿ ವಾಸ್ತವ ರೇಖೆ ಬಳಿ ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಬಡಿದಾಟ ನಡೆದಿದೆ.ತವಾಂಗ್ ಸೆಕ್ಟರ್ನಲ್ಲಿ ಡಿಸೆಂಬರ್ 9ರ ರಾತ್ರಿ ಗಡಿ ಕಾಯುತ್ತಿದ್ದ ಭಾರತ ಸೈನಿಕರನ್ನು ಚೀನಿ ಯೋಧರು ಕೆಣಕಿದ್ದಾರೆ. ಇದಕ್ಕೆ ಪ್ರತಿಯಾಗಿ ಭಾರತದ ಸೈನಿಕರು ತಿರುಗೇಟು ನೀಡಿದ್ದು, ಎರಡು ಕಡೆ ಸೈನಿಕರ ಮಧ್ಯೆ ಘರ್ಷಣೆ ನಡೆದಿದೆ. ಘರ್ಷಣೆಯಲ್ಲಿ