ನವದೆಹಲಿ : ಪ್ರವಾದಿ ಮೊಹಮ್ಮದ್ ಪೈಗಂಬರ್ರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ವ್ಯಾಪಕ ಟೀಕೆಗೆ ಒಳಗಾಗಿರುವ ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತು ಮಾಡಿದೆ. ನೂಪುರ್ ಶರ್ಮಾ ಹೇಳಿಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಷೇಪಣೆಗೆ ಒಳಗಾಗಿದ್ದು ಈ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಹ ಟ್ವೀಟ್ ಮಾಡಿದ್ದರು.ಪಾಕ್ ಪ್ರಧಾನಿಯ ಟ್ವೀಟ್ಗೆ ಭಾರತ ಸರ್ಕಾರ ತಿರುಗೇಟು ನೀಡಿದೆ. ಪಾಕಿಸ್ತಾನದ ಹೇಳಿಕೆಗಳನ್ನು ನಾವು ಗಮನಿಸಿದ್ದೇವೆ. ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮಾಡುವವರು ಮತ್ತೊಂದು