ಭೋಪಾಲ್ : ಮಧ್ಯಪ್ರದೇಶದ ಇಂದೋರ್ನಲ್ಲಿ ದೇವಾಲಯವೊಂದರಲ್ಲಿ ನೆಲ ಕುಸಿದ ಪರಿಣಾಮ ಅದರಡಿಯಲ್ಲಿದ್ದ ಸುಮಾರು 40 ಅಡಿ ಆಳದ ಬಾವಿಗೆ ಭಕ್ತರು ಬಿದ್ದು ಸಾವನ್ನಪ್ಪಿರುವ ಘಟನೆ ದುರಂತವೇ ಎನಿಸಿಕೊಂಡಿದೆ. ಇಲ್ಲಿಯವರೆಗೆ ಸಾವನ್ನಪ್ಪಿರುವವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ವರದಿಗಳ ಪ್ರಕಾರ ಗುರುವಾರ ರಾಮನವಮಿಯ ಹಿನ್ನೆಲೆ ನಗರದ ಬಾಳೇಶ್ವರ ಮಹಾದೇವ ದೇವಾಲಯದಲ್ಲಿ ಹೆಚ್ಚಿನ ಭಕ್ತರು ಆಗಮಿಸಿದ್ದರು. ದೇವಾಲಯದ ಆವರಣದಲ್ಲಿ ಮೆಟ್ಟಿಲು ಬಾವಿಯಿದ್ದು, ಅದಕ್ಕೆ ಮೇಲ್ಛಾವಣಿ ಹಾಕಿ ಮುಚ್ಚಲಾಗಿತ್ತು. ಆದರೆ ಕಳೆದ ದಿನ