ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿರುವ ಇಡಿ ನಿರ್ಧಾರವನ್ನು ಖಂಡಿಸಿ ಎಐಸಿಸಿ ಕಚೇರಿ ಮುಂಭಾಗದಲ್ಲಿ,ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಅವರು ದೆಹಲಿ ತಲುಪಿದ್ದಾರೆ.ಪ್ರತಿಭಟನೆಯಲ್ಲಿ ಭಾಗಿಯಾಗುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರಿಗೆ ನೈತಿಕ ಬೆಂಬಲ ನೀಡಲು ಬಂದಿದ್ದೇನೆ. ಬೆಂಗಳೂರಿನಲ್ಲಿ ಹೋರಾಟ ನಡೆಸಿದ್ದೆವು. ಈಗ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದೇನೆ ಎಂದರು. ಗಾಂಧಿ ಪರಿವಾರವನ್ನು ಉದ್ದೇಶಪೂರ್ವಕವಾಗಿ