ನವದೆಹಲಿ : ದೇಶದ ರೈತರಿಗೆ ಆದಾಯ ಭದ್ರತೆ ಖಾತ್ರಿಪಡಿಸಿಕೊಳ್ಳಲು ಗ್ರಾಮೀಣ ಆರ್ಥಿಕತೆಯ ಕಡೆಗೆ ವಿಶೇಷ ಗಮನ ಹರಿಸಬೇಕಿದೆ ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಕರೆ ನೀಡಿದರು. ಗುರುಗ್ರಾಮದಲ್ಲಿ ಹರಿಯಾಣ ಅಕಾಡೆಮಿ ಆಫ್ ಹಿಸ್ಟರಿ ಅಂಡ್ ಕಲ್ಚರ್ ಹೊರತಂದಿರುವ ಸರ್ ಛೋಟು ರಾಮ್: ಬರಹಗಳು ಮತ್ತು ಭಾಷಣಗಳು ಐದು ಸಂಪುಟಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿಯೂ ರೈತರು ತಡೆರಹಿತವಾಗಿ ತಮ್ಮ ಕಾರ್ಯ ಮುಂದುವರಿಸಿದ್ದರು ಎಂದು