ನವದೆಹಲಿ : ಪ್ರತಿಪಕ್ಷಗಳು ತಮ್ಮ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಟೀಕಿಸುತ್ತಿರುವುದು ಬೌದ್ಧಿಕ ಅಪ್ರಾಮಾಣಿಕತೆ ಮತ್ತು ರಾಜಕೀಯ ವಂಚನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. ದಶಕಗಳ ಹಿಂದೆಯೇ ದೇಶದ ಜನರಿಗೆ ಸಿಗಬೇಕಾಗಿದ್ದ ಸೌಲಭ್ಯಗಳನ್ನು ಕಲ್ಪಿಸಲು ಕಠಿಣ ಮತ್ತು ದೊಡ್ಡ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ಹೇಳಿದ್ದಾರೆ. ಕೃಷಿ ಕಾನೂನುಗಳನ್ನು ದೃಢವಾಗಿ ಸಮರ್ಥಿಸಿಕೊಂಡ ಪ್ರಧಾನಿ ಮೋದಿ, ಒಂದು ರಾಜಕೀಯ ಪಕ್ಷವು ತಾನು ನೀಡಿದ್ದ ಭರವಸೆ