ಇಂಫಾಲ : ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಮಣಿಪುರದ ಬುಡಕಟ್ಟು ವಿದ್ಯಾರ್ಥಿ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು,ಇದು ಹಿಂಸಾಚಾರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆ ಮಣಿಪುರ ರಾಜ್ಯ ಸರ್ಕಾರ 5 ದಿನಗಳ ಕಾಲ ರಾಜ್ಯಾದ್ಯಂತ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.ಶನಿವಾರ ಸಂಜೆ ಮಣಿಪುರದಲ್ಲಿ 3-4 ಮಂದಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಬಿಷ್ಣುಪುರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದರು. ಈ ಹಿನ್ನೆಲೆ ಮಣಿಪುರ ಸರ್ಕಾರ ತುರ್ತು ಆದೇಶದಲ್ಲಿ