ನವದೆಹಲಿ : ಸಂವಿಧಾನದ 1ನೇ ವಿಧಿಗೆ ತಿದ್ದುಪಡಿ ತರುವ ಮೂಲಕ ಇಂಡಿಯಾ ಪದವನ್ನು ಅಳಿಸಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಈ ಹೊತ್ತಲ್ಲೇ ಇಂಡಿಯಾ ಹೆಸರಿನ ಮೇಲೆ ಹಕ್ಕನ್ನು ಪಾಕಿಸ್ತಾನ ಪ್ರತಿಪಾದಿಸುತ್ತಾ ಎಂಬ ಪ್ರಶ್ನೆ ಎದ್ದಿದೆ. ಇಂಡಿಯಾ ಹೆಸರನ್ನು ವಿಶ್ವಸಂಸ್ಥೆ ಮಟ್ಟದಲ್ಲಿ ಭಾರತ ಅಧಿಕೃತವಾಗಿ ಕೈಬಿಟ್ಟಲ್ಲಿ, ಇಂಡಿಯಾ ಹೆಸರಿನ ಮೇಲೆ ಪಾಕಿಸ್ತಾನ ಹಕ್ಕು ಸಾಧಿಸಲು ಯತ್ನಿಸಬಹುದು ಎನ್ನಲಾಗುತ್ತಿದೆ. ಇಂಡಿಯಾ ಎಂಬ ಪದ ಇಂಡಸ್ ಪ್ರಾಂತ್ಯವನ್ನು ಸೂಚಿಸುತ್ತದೆ. ಪ್ರಸ್ತುತ ಈ ಪ್ರಾಂತ್ಯ ಪಾಕಿಸ್ತಾನದಲ್ಲಿದೆ.ಭಾರತ