ಚೆನ್ನೈ : ಕರ್ನಾಟಕದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಎದ್ದಿರುವ ನಡುವೆಯೇ ‘ದೇಶ ಮುಖ್ಯವೋ, ಧರ್ಮ ಮುಖ್ಯವೋ’ ಎಂದು ಮದ್ರಾಸ್ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ.ದೇಶದಲ್ಲಿ ಇತ್ತೀಚೆಗೆ ಧಾರ್ಮಿಕ ಅಸಹಿಷ್ಣುತೆ ಹೆಚ್ಚುತ್ತಿದೆ. ದೇಶವನ್ನು ಧರ್ಮದ ಆಧಾರದಲ್ಲಿ ವಿಭಜಿಸುವ ಯತ್ನ ನಡೆಯುತ್ತಿದೆ ಎಂದು ಅದು ಕಿಡಿಕಾರಿದೆ.ತಮಿಳುನಾಡಿನ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ ಮಾಡಬೇಕು. ಹಿಂದೂಯೇತರರಿಗೆ ದೇವಾಲಯಗಳಲ್ಲಿ ಪ್ರವೇಶ ನೀಡಬಾರದು. ವಸ್ತ್ರಸಂಹಿತೆ ಬಗ್ಗೆ ದೇಗುಲದ ಹೊರಗಿನ ಫಲಕಗಳ ಮೇಲೆ ಬರೆಯುವಂತೆ ಆದೇಶಿಸಬೇಕು ಎಂದು