ನವದೆಹಲಿ : ದೇಶದಲ್ಲಿ ದೆಹಲಿ, ಪಂಜಾಬ್ ಸೇರಿದಂತೆ ಕೆಲ ರಾಜ್ಯಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರಿದೆ. ವಾಡಿಕೆಗಿಂತಲೂ ಹೆಚ್ಚಾಗಿರುವ ಮಳೆ ಕಲ್ಲಿದ್ದಲು ಪೂರೈಕೆ ಮೇಲೆ ಪರಿಣಾಮ ಬೀರಿರುವುದು, ಆಮದು ಕಲ್ಲಿದ್ದಲು ಅವಲಂಬಿಸಿದ್ದ ಸ್ಥಾವರಗಳು ಕಲ್ಲಿದ್ದಲು ದರ ಏರಿಕೆಯಿಂದಾಗಿ ಉತ್ಪಾದನೆ ಕಡಿತಗೊಳಿಸಿರುವುದು ಇದಕ್ಕೆ ಕಾರಣವಾಗಿದೆ. ಕಲ್ಲಿದ್ದಲು ಉತ್ಪಾದನೆ ತೃಪ್ತಿಕರವಾಗಿದ್ದರೂ ಮಳೆಯಿಂದಾಗಿ ಸರಬರಾಜು ವ್ಯತ್ಯಯವಾಗಿರುವುದು ಸಮಸ್ಯೆಗೆ ಕಾರಣವಾಗಿದೆ. ಗುಜರಾತ್, ಪಂಜಾಬ್, ರಾಜಸ್ಥಾನ, ದೆಹಲಿ ಮತ್ತು ತಮಿಳುನಾಡಿನಲ್ಲಿ ವಿದ್ಯುತ್ ಸಮಸ್ಯೆ ತೋರುವ ಸೂಚನೆಗಳು ಇವೆ. ಇರುವ